Salma Mathu Surabhi cover art

Salma Mathu Surabhi

Preview
Free with 30-day trial
Prime logo New to Audible Prime Member exclusive:
2 credits with free trial
1 credit a month to use on any title to download and keep
Listen to anything from the Plus Catalogue—thousands of Audible Originals, podcasts and audiobooks
Download titles to your library and listen offline
₹199.00 per month after 30-day trial. Cancel anytime.

Salma Mathu Surabhi

Written by: ವೈದೇಹಿ
Narrated by: Pallavi Rao
Free with 30-day trial

₹199.00 per month after 30-day trial. Cancel anytime.

Buy Now for ₹546.23

Buy Now for ₹546.23

ವೈದೇಹಿ ಕತೆಗಳನ್ನು ಓದುವುದೆಂದರೆ ಅತ್ಯಂತ ಸೂಕ್ಷ್ಮವಾದ ಶ್ರಾವಣ ಪ್ರತಿಭೆಯೊಂದರ ಮೂಲಕ ಜಗತ್ತನ್ನು ಗ್ರಹಿಸುವ ಕೆಲಸ... ವೈದೇಹಿಯವರ ಕತೆಗಳ ಪಾತ್ರಗಳ ಹುಟ್ಟು, ಅಸ್ತಿತ್ವಗಳು ಅವುಗಳಿಗೆ ವಿಶಿಷ್ಟವಾದ, ಅವುಗಳ ಸಂವೇದನೆಯ ಅವಿಭಾಜ್ಯ ಅಂಶವಾಗಿ, ಕರ್ಣನಿಗೆ ಕವಚ ಕುಂಡಲಗಳಿದ್ದಂತೆ ಇರುವ, ಅವುಗಳ ಮಾತಿನಲ್ಲಿವೆ. ನಮ್ಮ ಓದಿನಲ್ಲಿ ಈ ಪಾತ್ರಗಳು ಪ್ರತ್ಯಕ್ಷವಾಗುವುದು, ನಮ್ಮ ಅನುಭವಲೋಕವನ್ನು ಪ್ರವೇಶಮಾಡಿ ನಿಲ್ಲುವುದು ಅವುಗಳ ಮಾತಿನಿಂದಲೇ. ಇದು ಕೇವಲ ಕತೆಗಾತಿಯ ಜಾಣ್ಮೆ ಅಥವಾ ಕೌಶಲ್ಯದ ವಿಷಯವಲ್ಲ. ಅಥವಾ ಅವರು ಬಳಸುವ ಪ್ರಾದೇಶಿಕ ಭಾಷೆಯ ಸೊಗಡಿನ ವಿಷಯವಲ್ಲ. ಮನುಷ್ಯರ ಅಂತರಂಗದ ಅತ್ಯಂತ ಅನಿರೀಕ್ಷಿತವಾದ, ಗೋಚರಕ್ಕೂ ಬರದಷ್ಟು ಸೂಕ್ಷ್ಮವಾದ, ಸಂಗ್ರಹಿಸಿ ಹೇಳಹೊರಟರೆ ತಮ್ಮ ನೈಜ ಸಂಕೀರ್ಣತೆಯನ್ನು ಕಳೆದುಕೊಂಡು ಉಡುಗಿ ಹೋಗುವಂತಹ ವಿಶಿಷ್ಟವಾದ ಆ ಕ್ಷಣದ್ದೇ ಆದರೂ ಆಯಾ ವ್ಯಕ್ತಿಗಳ ಶೀಲವನ್ನು ಅಭಿವ್ಯಕ್ತಿಸುವ ಮಾಧ್ಯಮವಾಗಿ ಇರುವ ಮಾತುಗಳ ಬಗ್ಗೆ ನಾನು ಹೇಳುತ್ತಿದ್ದೇನೆ... ಕತೆಗಾತಿಯಾದ ವೈದೇಹಿಯವರ ಶಕ್ತಿಯಿರುವುದು ಈ ಮಾತಿನ ಪ್ರಪಂಚವನ್ನು, ವಾಸ್ತವ ಪ್ರಪಂಚದಷ್ಟೇ ಮೂರ್ತವಾದ, ಸಾಂದ್ರವಾದ, ನಿಬಿಡವಾದ ಮಾತಿನ ಪ್ರಪಂಚವನ್ನು ನಿರ್ಮಿಸುವುದರಲ್ಲಿ. ಅವರ ಕತೆಗಳಲ್ಲಿ ಆಗುವುದು ನಡೆಯುವುದು ಇವುಗಳ ಅಂಶ ಕಡಿಮೆಯೇ. ಆದರೆ ಮಾತುಗಳ ಮೂಲಕ 'ಘಟಿಸುವುದು' ಮಾತ್ರ ಅಚ್ಚರಿ ಹುಟ್ಟಿಸುವಷ್ಟು ವೈವಿಧ್ಯಪೂಣವಾಗಿದೆ, ಸಂಕೀರ್ಣವಾಗಿದೆ. - ರಾಜೇಂದ್ರ ಚೆನ್ನಿ©2021 Storyside IN (P)2021 Storyside IN Anthologies & Short Stories Genre Fiction Literary Fiction Short Stories
adbl_web_anon_alc_button_suppression_c
No reviews yet